Breaking News

ನಿಪ್ಪಾಣಿ | ಸಿಇಟಿ ಪರೀಕ್ಷೆ: ಉಚಿತ ಬಸ್‍ಗಳ ವ್ಯವಸ್ಥೆ

Spread the love

ನಿಪ್ಪಾಣಿ: ಏ.18 ಹಾಗೂ 19ರಂದು ಜರುಗಲಿರುವ ಸಿಇಟಿ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗಾಗಿ ಸ್ಥಳೀಯ ವಿಎಸ್‍ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ(ವಿಎಸ್‍ಎಂಎಸ್‍ಆರ್‌ಕೆಐಟಿ)ದಿಂದ ಬಸ್‍ಗಳ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.

ಉಮೇಶ ಪಾಟೀಲ ತಿಳಿಸಿದ್ದಾರೆ.

ತಾಂತ್ರಿಕ ಮಹಾವಿದ್ಯಾಲಯ (ಪರೀಕ್ಞಾ ಕೇಂದ್ರ ಸಂಖ್ಯೆ – 315)ದಲ್ಲಿ ವಿದ್ಯಾರ್ಥಿಗಳ ಹಾಗೂ ಪಾಲಕರ ಅನುಕೂಲಕ್ಕಾಗಿ ಬಸ್‍ಗಳನ್ನು ಉಚಿತವಾಗಿ ಬಿಡಲಾಗುವುದು. ಪರೀಕ್ಷೆಗಳು ನಡೆಯಲಿರುವ ಎರಡೂ ದಿನ ಬೆಳಿಗ್ಗೆ 8.30 ರಿಂದ 9.30ರ ವರೆಗೆ ಸ್ಥಳೀಯ ಬಸ್ ನಿಲ್ದಾಣದಿಂದ ಒಟ್ಟು 6 ಬಸ್‍ಗಳನ್ನು ಬಿಡಲು ನಿಯೋಜಿಸಲಾಗಿದೆ. ಅಲ್ಲದೆ ಪರೀಕ್ಷೆಗಳು ಮುಗಿಯುವವರೆಗೆ ಪಾಲಕರಿಗೆ ವಿಎಸ್‍ಎಂ ಕನ್ವೆನ್ಶನ್ ಹಾಲ್‌ನಲ್ಲಿ ವಿಶ್ರಾಂತಿ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆಗಳು ಮುಗಿದ ನಂತರ ಮತ್ತೆ ಮಹಾವಿದ್ಯಾಲಯದಿಂದ ಬಸ್ ನಿಲ್ದಾಣವರೆಗೆ ಬಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ