Breaking News

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Spread the love

ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್‌ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್‌ಕುಮಾರ್‌ ಒತ್ತಾಯಿಸಿದ್ದಾರೆ.

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

ಕಾಂಗ್ರೆಸ್‌ ಅಭ್ಯರ್ಥಿ ಕರ್ನಾಟಕದ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದ ನಾಯಕರ ಆಶೀರ್ವಾದ ಇಲ್ಲದೇ ಇಂತಹ ಹೇಳಿಕೆಗಳನ್ನು ನೀಡಲು ಸಾಧ್ಯವೇ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ರಾಜ್ಯವನ್ನು ಒಡೆಯುವುದು ಕಾಂಗ್ರೆಸ್‌ ಪಕ್ಷದ ರಹಸ್ಯ ಕಾರ್ಯಸೂಚಿಯೇ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು. ವಿಚಿತ್ರವೆಂದರೆ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್‌ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೂ ಮುಖ್ಯಮಂತ್ರಿ ಇದೇ ರೀತಿ ಮೌನ ವಹಿಸಿದ್ದರು ಎಂದು ಸುನಿಲ್‌ಕುಮಾರ್‌ ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ