Breaking News

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Spread the love

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಸಿಇಟಿ ಗುರುವಾರದಿಂದ ಆರಂಭಗೊಳ್ಳಲಿದ್ದು ದಾಖಲೆಯ 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಕಳೆದ ವರ್ಷ 2.60 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು ಈವರೆಗಿನ ದಾಖಲೆಯಾಗಿತ್ತು.

ಆದರೆ ಈ ವರ್ಷ ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು ಹೊಸ ದಾಖಲೆ ನಿರ್ಮಾಣಗೊಳ್ಳಲಿದೆ.

ಇಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಗುರುವಾರ ಮತ್ತು ಶುಕ್ರವಾರ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಯ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಬರೆಯುತ್ತಿದ್ದಾರೆ.

ಗುರುವಾರ ಜೀವಶಾಸ್ತ್ರ, ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಕಲಬುರಗಿ ಮುಂತಾದ ಉತ್ತರ ಕರ್ನಾಟಕದ ಭಾಗಗಳ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಗೊಂದಲವನ್ನು ಬಗೆಹರಿಸಿದ್ದು ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಬೇಸಿಗೆಯ ಝಳ ಇರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್‌ ಕೆಡೆಟ್‌ಗಳು ಪರೀಕ್ಷೆಯು ಸುಗಮವಾಗಿ ನಡೆಯಲು ಸಹಕರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

Spread the love ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ