Breaking News

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

Spread the love

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು.ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

 

ಲೋಕಸಭೆ ಚುನಾವಣೆಯ ನಂತರ ಸಿದ್ದರಾಮಯ್ಯ ಅವರನ್ನು ಕಿತ್ತೆಸೆಯುವುದಾಗಿ ವಿಪಕ್ಷ ನಾಯಕರು ಹೇಳುತ್ತಿದ್ದಾರೆ. ಅದಕ್ಕೆಲ್ಲ ಅವಕಾಶ ಮಾಡಿಕೊಡಬೇಡಿ, ಸಿದ್ದರಾಮಯ್ಯನವರ ಕೈ ಬಲಪಡಿಸಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ