Breaking News

ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ

Spread the love

ಬೆಂಗಳೂರು, ಏಪ್ರಿಲ್ 19: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠರನ್ನು ಮುಸ್ಲಿಂ ಸಮುದಾಯದ ವ್ಯಕ್ತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ಕುರಿತು ಸ್ವತಃ ಮೃತಳ ತಂದೆ ಪ್ರತಿಕ್ರಿಯಿಸಿದ್ದಾರೆ.

ಮಗಳು ಕಳೆದುಕೊಂಡ ತಂದೆಯ ಆಕ್ರಂದನ ಮುಗಿಲು ಮುಟ್ಟಿದೆ.

ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ: ಒಂದು ಟ್ವೀಟ್‌ಗೆ ಸಿಎಂ ಜವಾಬ್ದಾರಿ ಮುಗಿಯಿತೇ?: ಮಾಜಿ ಸಿಎಂ

ಈ ನೋವಿನಲ್ಲೇ ಮಗಳ ಕುರಿತು ಮಾತನಾಡಿರುವ ಅವರು, ನನ್ನ ಮಗಳ ಕೊಲೆ ಹಿಂದೆ ಲಬ್ ಜಿಹಾದ್ ಇದೆ. ಕೊಲೆಗಾರನ ಜೊತೆಗೆ ನಾಲ್ಲೈದು ಅದೇ ಸಮುದಾಯದವರು ಇರುತಿದ್ದರು.

ಅನೇಕ ಬಾರೀ ಮಗಳ ಜೊತೆಗೆ ಮಾತನಾಡುವುದನ್ನು ನಾನು ನೋಡಿದ್ದೇನೆ ಎಂದರು.

ಸರ್ಕಾರ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ನನ್ನ ಮಗಳಿಗೆ ಆದ ಅನ್ಯಾಯ ಬೇರೆ ಹೆಣ್ಣು ಮಕ್ಕಳಿಗೆ ಆಗಬಾರದು. ನನ್ನ ಮಗಳು ಬಹಳ ಮುಗ್ಧೆ. ಯಾರೋಂದಿಗೂ ಯಾರದೊಂದಿಗೆ ಜಗಳ ಆಡುವ ಸ್ವಭಾವದವಳಲ್ಲ. ಅವಳು ಪ್ರತಿಭಾವಂತೆ ಎಂದು ತಂದೆ ನಿರಂಜನ್ ಹಿರೇಮಠ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ