Breaking News

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the love

ಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ ಎಂಬಾತನನ್ನು ಹುಬ್ಬ‍‍ಳ್ಳಿ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು, ಆರೋಪಿ ಫಯಾಝ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ

ಈ ನಡುವೆ ನೇಹಾ ಕೊಲೆ ಆರೋಪಿ ಫಯಾಝ್ ಬೆಳಗಾವಿ ಜಿಲ್ಲೆಯ ಸವದತ್ತಿಯ ಹತ್ತಿರದ ಮುನವಳ್ಳಿ ನಿವಾಸಿಯಾಗಿದ್ದು, ಅಲ್ಲಿ ಹಿಂದೂ, ಮುಸ್ಲಿಮರು ಜಂಟಿಯಾಗಿ ಹತ್ಯೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಮಂದಿ ನೇಹಾ ಹಿರೇಮಠ್ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ‌

ಹುಬ್ಬಳ್ಳಿಯಲ್ಲೂ ಸಹ ನೇಹಾ ಹತ್ಯೆಯನ್ನು ಮುಸ್ಲಿಂ ಸಮುದಾಯ ತೀವ್ರವಾಗಿ ಖಂಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದೆ. ಅಳ್ನಾವರ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ ಹಾಗೂ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಕಮಿಷನರ್ ಅವರಿಗೆ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮವಹಿಸಲು ಆಗ್ರಹಿಸಿದ್ದಾರೆ.

ಈ ಕುರಿತು ಅಂಜುಮನ್ ಸಂಸ್ಥೆಯ ಪ್ರಮುಖರಾದ ಅಲ್ತಾಫ್ ಮಾತನಾಡಿ, ಆರೋಪಿಯನ್ನು ಎನ್‍ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಏನೇ ಆಗಲಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ. ಆದರೆ, ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ