ಹುಬ್ಬಳ್ಳಿ: ಈ ಬಾರಿಯ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ (Dingaleshwara) ಪೇಮೆಂಟ್ ಬಂದಿದೆ. ಈ ಪೇಮೆಂಟ್ ಯಾರು ಮಾಡಿದ್ದಾರೆಂಬುದು ನನಗೆ ಗೊತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda patil yatnal) ಗಂಭೀರವಾಗಿ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರು ಪೇಮೆಂಟ್ ಮಾಡಿದ್ದಾರೆಂದು ಮೇ ೭ರಂದು ಬಹಿರಂಗಪಡಿಸುತ್ತೇನೆ ಎಂದರು.ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಈ ಚುನಾವಣೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ 5 ಸಾವಿರ ಮತಗಳನ್ನು ಪಡೆಯುತ್ತಾರೆಂದು ಭವಿಷ್ಯ ನುಡಿದರು.
ಈ ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅವರು ಎಷ್ಟು ಮತಗಳನ್ನು ಪಡೆದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದ ಅವರು, ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿಯನ್ನು ತೆಗಳುತ್ತಿದ್ದರು. ಆದರೆ ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿದ್ದಾರೆಂದರು.
Laxmi News 24×7