Breaking News

ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ:ಸಿಎಂ

Spread the love

ಮೈಸೂರು: ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

BIG NEWS: ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃತ್ಯದ ಬಳಿಕ ಕೊಲೆಗಾರರನ್ನು ತಕ್ಷಣ ಬಂಧಿಸಲಾಗಿದೆ.

ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನಿಸಲಾಗುವುದು ಎಂದರು.

ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸುತ್ತೇವೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ಖಂಡನೀಯ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ಬಿಜೆಪಿ ನಯಕರು ರಾಜಕೀಯಕ್ಕಾಗಿ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ