Breaking News

ರಾಜಕೀಯ ಕಾರಣಕ್ಕೆ ನೇಹಾ ಕೊಲೆ ಪ್ರಕರಣ ಬಳಕೆ : ಸಿಎಂ ಸಿದ್ದರಾಮಯ್ಯ

Spread the love

ಮೈಸೂರು: ನೇಹಾ ಹಿರೇಮಠ ಅವರ ಕೊಲೆ ವೈಯಕ್ತಿಕ ಕಾರಣಕ್ಕೆ ಸಂಭವಿಸಿದೆ. ಇದನ್ನು ನಾನು ತೀವ್ರ ಖಂಡಿಸುತ್ತೇನೆ. ಈ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ ಕಾರಣಕ್ಕೆ ನೇಹಾ ಕೊಲೆ ಪ್ರಕರಣ ಬಳಕೆ : ಸಿಎಂ ಸಿದ್ದರಾಮಯ್ಯ

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಆರೋಪಿಯನ್ನು ಬಂಧಿಸಲಾಗಿದೆ. ಆದರೆ, ಬಿಜೆಪಿ ಇದನ್ನೇ ಅಸವಾಗಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು.

ನಾವು ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ ಸದಾ ಗಂಭೀರವಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತದೆ. ಬಿಜೆಪಿ ಕಾಲದಲ್ಲೂ ಕೊಲೆಗಳಾಗಿವೆ. ಹಾಗೆಂದ ಮಾತ್ರಕ್ಕೆ ನಾವು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದರ್ಥವಲ್ಲ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ