Home / ಹುಬ್ಬಳ್ಳಿ / ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

Spread the love

ಧಾರವಾಡ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಆರೋಪಿ ಫಯಾಜ್‌ಗೆ ಶೀಘ್ರ ಕಠಿನ ಶಿಕ್ಷೆ ಕೊಡಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲುವ ಉದ್ದೇಶದಿಂದ ಸ್ವಯಂ ಪ್ರೇರಿತವಾಗಿ ಏ.22 ರಂದು ಮುಸ್ಲಿಂ ಸಮುದಾಯ ಹುಬ್ಬಳ್ಳಿ-ಧಾರವಾಡದಲ್ಲಿ ಅಂಗಡಿ-ಮುಂಗಟ್ಟು ಬಂದ್‌ ಮಾಡಿ ಮೌನ ಮೆರವಣಿಗೆ ಮಾಡಲು ಧಾರವಾಡದ ಅಂಜುಮನ್‌ ಇ-ಇಸ್ಲಾಂ ಸಂಸ್ಥೆಯಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ ಹೇಳಿದರು‌.

ಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 22ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3ರ ವರೆಗೆ ಮುಸ್ಲಿಂ ಸಮುದಾಯದಿಂದ ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗುವುದು. ಸಮಸ್ತ ಮುಸ್ಲಿಂ ಬಂಧುಗಳು, ಮೊಹಲ್ಲಾ ಮಸೀದಿ ಮೌಲ್ವಿ, ಮುತವಲ್ಲಿಗಳು ಭಾಗವಹಿಸಲಿದ್ದಾರೆ. ನಂತರ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಆರೋಪಿಗೆ ಶೀಘ್ರ ಶಿಕ್ಷೆಯಾಗಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಇಸ್ಲಾಂ ಧರ್ಮದಲ್ಲಿ ಹತ್ಯೆ ಮಾಡುವ ಹಕ್ಕಿಲ್ಲ. ಪ್ರೀತಿಯ ನೆಪದಲ್ಲಿ ನೇಹಾಳನ್ನು ಹತ್ಯೆ ಮಾಡಿದ್ದು ಘೋರ ಅಪರಾಧ. ಇಂತಹ ಘಟನೆಗಳು ಪದೇ ಪದೇ ಸಂಭವಿಸದಂತೆ ಇನ್ಮುಂದೆ ಎಚ್ಚರಿಕೆ ವಹಿಸುವ ಕಾರ್ಯವಾಗಬೇಕಿದೆ ಎಂದರು‌.

ನೇಹಾ ಹತ್ಯೆಯು ನಾಡಿನ ಮುಸ್ಲಿಂ ಸಮುದಾಯಕ್ಕೂ ಬಹಳ ನೋವು ತಂದಿದೆ. ಕ್ರೂರಿ ಫಯಾಜ್‌ ಮಾಡಿರುವ ಕೃತ್ಯದಿಂದ ಇಡೀ ಮುಸ್ಲಿಂ ಸಮುದಾಯ ತಲೆ ತಗ್ಗಿಸುವಂತಾಗಿದೆ. ಇನ್ಮುಂದೆ ಇಂತಹ ಕೃತ್ಯಗಳು ಮರುಕಳುಹಿಸದಂತೆ ಎಚ್ಚರ ವಹಿಸುವ ಅಗತ್ಯವಿದೆ ಎಂದರು.

ಯುವಕರು ಡ್ರಗ್ಸ್‌ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ನಶೆಯಲ್ಲಿ ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇಂತಹ ಕೃತ್ಯಗಳಿಗೆ ಇಡೀ ಸಮಾಜ ಖಂಡಿಸಬೇಕು. ಜತೆಗೆ ಮುಸ್ಲಿಂ ಸಮಾಜ ಮಾಡುತ್ತಿರುವ ಈ ಪ್ರತಿಭಟನೆಯು ಇಡೀ ಯುವ ಜನಾಂಗಕ್ಕೆ ಸಂದೇಶವಾಗಬೇಕು ಎಂದ ತಮಟಗಾರ, ಅಂಜುಮನ್‌ ಇಸ್ಲಾಂ ಸಂಸ್ಥೆಯ ಶಾಲಾ-ಕಾಲೇಜುಗಳಲ್ಲಿ ಇಂತಹ ಅಪರಾಧಗಳು ಆಗದಂತೆ ಸಿಸಿ ಟಿವಿ, ಕಾವಲುಗಾರರ ನೇಮಿಸಿ ಎಚ್ಚರ ವಹಿಸಲಾಗುವುದು ಎಂದರು.


Spread the love

About Laxminews 24x7

Check Also

‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’

Spread the loveಹುಬ್ಬಳ್ಳಿ: ‘ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಯಾವತ್ತು ಹೇಳಿಲ್ಲ. ಕೇಂದ್ರ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ