ಬೆಂಗಳೂರು:- ರಾಜ್ಯದಲ್ಲಿ ಇಂದಿನಿಂದ ಉತ್ತಮ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಉತ್ತಮವಾಗಿ ಮಳೆ ಬರಲಿದೆ.ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಸಹಿತ ಮೈಸೂರು, ಹುಬ್ಬಳ್ಳಿ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಇಲ್ಲೆಲ್ಲ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಮಳೆಯಾಗುತ್ತೆ ಎಂದು ತಿಳಿದು ಬಂದಿದೆ.
ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಂತಹ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿಯೂ ಮಳೆ ಸುರಿಯುವ ಮುನ್ಸೂಚನೆ ಇದೆ. ಈ ವಾರ ಹೆಚ್ಚಿನ ಮಳೆಯನ್ನು ಜನ ನಿರೀಕ್ಷೆ ಮಾಡ್ತಾ ಇದಾರೆ. ಕರಾವಳಿ ಭಾಗದಲ್ಲಿ ಉತ್ತಮವಾಗಿ ಮಳೆ ಸುರಿದಿದ್ದು ಮತ್ತದೇ ರೀತಿಯ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ತುಂಬಾ ದಿನಗಳ ಬಳಿಕ ಶನಿವಾರ ಬೆಂಗಳೂರಿನ ದಕ್ಷಿಣ, ಪೂರ್ವ ಭಾಗದಲ್ಲಿ ಮಳೆಯಾಗಿದೆ. ಇಂದು ಉತ್ತರ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ತಿಳಿಸಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾ
Laxmi News 24×7