Breaking News

ನೇಹಾ ಕೊಲೆ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಬೇಕು-ಜೆಪಿ ನಡ್ಡಾ ಆಗ್ರಹ

Spread the love

ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಏ.21) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರು ಹುಬ್ಬಳ್ಳಿಗೆ ಆಗಮಿಸಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾತನಾಡಿದ ಅವರು, ‘ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ, ಏ.21: ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ(Hubballi) ಮಾತನಾಡಿದ ಅವರು, ‘ಇಡೀ ದೇಶವೇ ನೇಹಾ ಹಿರೇಮಠ ಕುಟುಂಬದ ಪರ ಇದೆ. ಸಿಎಂ ಹಾಗೂ ಗೃಹ ಸಚಿವರ ಹೇಳಿಕೆ ಪ್ರಕರಣದ ಹಾದಿ ತಪ್ಪಿಸುತ್ತಿದೆ. ಕರ್ನಾಟಕದ ಜನತೆ ಇದನ್ನು ಕ್ಷಮಿಸುವುದಿಲ್ಲ. ರಾಜ್ಯ ಪೊಲೀಸರು ಅಸಮರ್ಥರಿದ್ದಾರೆ, ಹೀಗಾಗಿ ನೇಹಾ ತಂದೆಗೂ ರಾಜ್ಯ ಸರ್ಕಾರದ ಮೇಲೆ ಭರವಸೆ ಇಲ್ಲ. ಅವರು ಕೂಡ ತನಿಖೆಯನ್ನು ಸಿಬಿಐಗೆ ವಹಿಸಲು ಮನವಿ ಮಾಡಿದ್ದಾರೆ ಎಂದರು.

ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ದಿನೇ ದಿನೇ ರಾಜಕೀಯ ಸ್ವರೂಪ ಪಡೆಯಲಾರಂಭಿಸಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ದಾಳವನ್ನಾಗಿಸೋ ಪ್ರಯತ್ನಗಳು ಸಹ ನಡೆದಿವೆ. ಇನ್ನು ನೇಹಾಳ ಫೋಟೋ ಹರಿಬಿಟ್ಟಿರುವ ವಿಚಾರಕ್ಕೆ ಕಿಡಿಕಾರಿದ ನಿರಂಜನ್​, ‘ಆರೋಪಿ ತಂದೆ, ತಾಯಿ ಯಾರೇ ಇರಲಿ ಆತನಿಗೆ ಬೆಂಬಲ ಕೊಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕೆಂದರು. ನೇಹಾಳ ಸಾವಿಗೆ ನ್ಯಾಯ ಸಿಗುವವರೆಗೂ ನಿರಂಜನ್ ಕುಟುಂಬದ ಜೊತೆ ಮುಸ್ಲಿಂ ಸಮುದಾಯ ಇರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಇದೆ ವೇಳೆ ನೇಹಾ ನಿವಾಸಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಿರಂಜನ್ ಹಿರೇಮಠ ಮತ್ತು ಗೀತಾರ ಜೊತೆ ಪ್ರತ್ಯೇಕ ಮಾತುಕತೆ ಮಾಡಿ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿಚಾರಣೆಗೆ ಪ್ರತ್ಯೇಕ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಬೇಕು. ಕೊಲೆಗಡುಕನಿಗೆ ಗಲ್ಲು ಶಿಕ್ಷೆ ಆಗಬೇಕು. ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ಗೇ ಒಪ್ಪಿಸುವಂತೆ ಮನವಿ ಮಾಡ್ತೇನೆ. ನೇಹಾಳ ತಂದೆ ತಾಯಿ ತುಂಬಾ ದುಃಖದಲ್ಲಿದ್ದಾರೆ. ತಮ್ಮ ಸ್ವಾರ್ಥ ಲಾಭಕ್ಕೆ ಆಕೆಗೆ ಅಪಮಾನ ಮಾಡ್ಬೇಡಿ. ನ್ಯಾಯ ಸಿಗೋವರೆಗೂ ನಾವು ಜೊತೆಗಿರಬೇಕು. ಆಯೋಗಕ್ಕೆ ಫ್ರೀ ಹೆಲ್ಪ್ ಲೈನ್ ಸಹ ಕೇಳಲಾಗಿದೆ. ರಾಜಕೀಯವಾಗಿ ಯಾರೂ ಸಾವನ್ನು ದುರ್ಬಳಕೆ ಮಾಡಿಕೊಳ್ಳಬೇಡಿ. ಸಿಎಂ ಆಗಲಿ, ಗೃಹ ಸಚಿವರಾಗಲಿ ಮೃತರ ಕುಟುಂಬಕ್ಕೆ ನೋವು ಕೊಡುವ ಹೇಳಿಕೆ ಕೊಡಬಾರದು ಎಂದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ