ಟೊರೆಂಟೊ: ಹದಿಹರೆಯದ ಭಾರತದ ಗ್ರ್ಯಾನ್ ಮಾಸ್ಟರ್ ಡಿ ಗುಕೇಶ್ ಅವರು ಇತಿಹಾಸ ಬರೆದಿದ್ದಾರೆ. ಕ್ಯಾಂಡಿಡೇಟ್ಸ್ ಚೆಸ್ ಟೂರ್ನಮೆಂಟ್ ನಲ್ಲಿ ಚಾಂಪಿಯನ್ ಆಗಿ ಮೂಡಿಬಂದ 17 ವರ್ಷದ ಗುಕೇಶ್, ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಕ್ಯಾಂಡಿಡೇಟ್ಸ್ ಕಪ್ ಗೆದ್ದ ಕೇವಲ ಎರಡನೇ ಭಾರತೀಯನಾಗಿ ಗುಕೇಶ್ ಮೂಡಿಬಂದಿದ್ದಾರೆ.

ಈ ಹಿಂದೆ ವಿಶ್ವನಾಥನ್ ಆನಂದ್ ಅವರು ಈ ಸಾಧನೆ ಮಾಡಿದ್ದರು. ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್ ಅವರ ವಿಜಯವು 2014 ರಲ್ಲಿ ಕ್ಯಾಂಡಿಡೇಟ್ಸ್ ಚಾಂಪಿಯನ್ ಶಿಪ್ ಗೆದ್ದುಕೊಂಡಿದ್ದರು.
ಅಮೆರಿಕದ ಹಿಕರು ನಕಮುರಾ ವಿರುದ್ಧ ಅಂತಿಮ ಸುತ್ತಿನ ಪಂದ್ಯವನ್ನು ಡ್ರಾ ಮಾಡಿದ ನಂತರ ಗುಕೇಶ್ 14 ಅಂಕಗಳಲ್ಲಿ ಒಂಬತ್ತು ಅಂಕಗಳನ್ನು ಸಂಗ್ರಹಿಸಿದರು.
ಗುಕೇಶ್ ಈ ವರ್ಷದ ಕೊನೆಯಲ್ಲಿ ವಿಶ್ವ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ವಿಶ್ವ ಚಾಂಪಿಯನ್ ಶಿಪ್ ಕಿರೀಟಕ್ಕಾಗಿ ಎದುರಿಸಲಿದ್ದಾರೆ.
Laxmi News 24×7