Breaking News

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

Spread the love

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಬಾಬಾಸಾಹೇಬ ಖೊಂಡಾನಾಯಕ್‌ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಗಾಗಿ ಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ತಂಡದ ಅಧಿಕಾರಿಗಳು ಹುಬ್ಬಳ್ಳಿಗೆ ಹೋಗಿದ್ದಾರೆ. ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಪ್ರಕರಣದ ಇತರೆ ಮಾಹಿತಿ ಕಲೆಹಾಕಿ, ತನಿಖೆ ಮುಂದುವರಿಸಲಿದ್ದಾರೆ’ ಎಂದು ಸಿಐಡಿ ಡಿಜಿಪಿ ಎಂ.ಎ. ಸಲೀಂ ತಿಳಿಸಿದರು.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ