Breaking News

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the love

ಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿಗಳು ಸಧ್ಯ ಹಿಂಡಲಗಾ ಕಾರಾಗೃಹದಿಂದ ಬಿಡುಗಡೆ ಆಗಿದ್ದು ಇವರಿಗೆ ಹೂ ಹಾರ ಹಾಕಿ ಅದ್ದೂರಿ ಸ್ವಾಗತ ನೀಡಿರುವ ವೀಡಿಯೋ ವೈರಲ್ ಆಗಿವೆ.

ನಾಲ್ಕು ತಿಂಗಳ ನಂತರ ನಂತರ ಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ. 14 ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಇಡಲಾಗಿತ್ತು. ಬೇಲ್ ಸಿಗುತ್ತಿದ್ದಂತೆ ಕಾರಾಗೃಹದಿಂದ ಹೊರಬಂದ ಆರೋಪಿಗಳ ಪೈಕಿ ಬಸಪ್ಪ ನಾಯ್ಕ್ ಎಂಬುವವರಿಗೆ ಹೂವಿನ ಮಾಲೆ ಹಾಕಿ ಸಿಹಿ ತಿನ್ನಿಸಿ ಜೈಲು ಎದುರಲ್ಲೆ ಸ್ವಾಗತ ಕೋರಲಾಗಿದೆ.ವಂಟಮೂರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್ ಪ್ರತಿ ಕ್ಷಣದಲ್ಲಿಯೂ ಪ್ರಕರಣ ಸಂಬಂಧಿಸಿದಂತೆ ಮಹತ್ವದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು. ಹಾಗೆಯೇ ಇಡೀ ಪ್ರಕರಣದ ಕುರಿತು ಕಟುವಾದ ಶಬ್ದಗಳಲ್ಲಿ ಟೀಕೆ ಮಾಡಿತ್ತು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ