Breaking News

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love

ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರು ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯ ಕಾರ್ಡ್ ಹಂಚಿಕೆ ಮಾಡ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

 

ಐದು ಯೋಜನೆಯನ್ನ ಕಾರ್ಡ್ ನಲ್ಲಿ (Gift Card) ಪ್ರಿಂಟ್ ಮಾಡಿಸಿ ಬೆಳ್ಳಿ ಬಟ್ಟಲು, ಕುಕ್ಕುಮ್ಮ ಹಾಗು ಅಕ್ಷತೆ ಗಿಫ್ಟ್ ಹಂಚಿಕೆ ಮಾಡ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಮನಗರದ ನೆಲಮಲೆ ಗ್ರಾಮದಲ್ಲಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರನ್ನ ಅಡ್ಡಹಾಕಿ ಜೆಡಿಎಸ್ ಕಾರ್ಯಕರ್ತರು (JDS Activists) ಕ್ಲಾಸ್ ತೆಗೆದುಕೊಂಡಿದ್ದರೆ. ಇದಕ್ಕೆ ಸಮರ್ಥನೆ ನೀಡಿರುವ ಕಾಂಗ್ರೆಸ್ ಕಾರ್ಯಕರ್ತರು, ನಮ್ಮ ಯೋಜನೆಯನ್ನು ನಾವು ಹೇಳ್ತೇವೆಂದು ಹೇಳಿದ್ದರೆ.

ರಾಮನಗರದ ಕೆಂಪೇಗೌಡನದೊಡ್ಡಿಯಲ್ಲಿ ಪ್ರತಿ ಮನೆಮನೆಗೂ ಒಂದು ಜತೆ ಬೆಳ್ಳಿಯ ಅರಿಶಿಣ, ಕುಕ್ಕುಮ್ಮದ ಬಟಲನ್ನು ಉಡುಗೊರೆ ನೀಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಚ್​ ಡಿ ಕುಮಾರಸ್ವಾಮಿ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಗಿಫ್ಟ್ ಕಾರ್ಡುಗಳನ್ನು ಹಂಚಿದೆ. ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣೆ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ


Spread the love

About Laxminews 24x7

Check Also

ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂದರು ಮಾತ್ರ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: “ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ಕುಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ