Breaking News
Home / Uncategorized / ಪೊಲೀಸರು-ಗ್ರಾಮಸ್ಥ’ರ ನಡುವೆ ಗಲಾಟೆ: ‘ಮತ ಯಂತ್ರ’ ಪೀಸ್‌ ಪೀಸ್‌

ಪೊಲೀಸರು-ಗ್ರಾಮಸ್ಥ’ರ ನಡುವೆ ಗಲಾಟೆ: ‘ಮತ ಯಂತ್ರ’ ಪೀಸ್‌ ಪೀಸ್‌

Spread the love

ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ. ಯಾವುದೇ ಮೂಲ ಸೌಕರ್ಯವಿಲ್ಲವೆಂದು ರೊಚ್ಚಿಗೆದ್ದ ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮತಯಂತ್ರಗಳನ್ನು ಪೀಸ್ ಪೀಸ್ ಮಾಡಿದ್ದಾರೆ.

 

ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ. ಬಳಿಕ ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ.

ಇನ್ನೂ ಮತಗಟ್ಟೆಯ ಮೇಲೆ ಗ್ರಾಮಸ್ಥರ ದಾಳಿಯಿಂದಾಗಿ ಮತಗಟ್ಟೆಯ ಕೆಲ ಅಧಿಕಾರಿಗಳು ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹನೂರು ತಹಶೀಲ್ದಾರ್ ಆಗಮಿಸಿ, ಪರಿಸ್ಥಿತಿ ನಿಯಂತ್ರಿಸೋಕ್ಕೆ ಕ್ರಮವಹಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Spread the love ಬೀದರ್: ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ