Breaking News

ಲಾರಿಯಿಂದ ಬಂತಾ ಕೊರೊನಾ? ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಮೂವರಿಗೆ ಕೊರೊನಾ ಶಂಕೆ

Spread the love

ಬೆಂಗಳೂರು: ಟ್ರಾವೆಲ್ ಹಿಸ್ಟರಿ ಇಲ್ಲದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆ ಜನ ಆತಂಕಗೊಂಡಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಸಿದ್ದನಹೊಸಹಳ್ಳಿಯ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 26, 28, 29 ವರ್ಷದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ಖಾಸಗಿ ಆಸ್ಪತ್ರೆಯಲ್ಲಿ ಶಂಕೆ ವ್ಯಕ್ತವಾಗಿದೆ.

ಮೂವರು ಯುವಕರನ್ನು ಹೆಚ್ಚಿನ ಪರೀಕ್ಷೆಗಾಗಿ ನಗರದ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರು ಯುವಕರನ್ನು ಕ್ವಾರಂಟೈನ್ ಮಾಡಲಾಗಿದೆ. ಅನ್‍ಲೋಡ್ ಮಾಡಲು ಬಂದ ಮುಂಬೈ ಮೂಲದ ಲಾರಿ ಚಾಲಕರಿಂದ ಕೊರೊನಾ ವೈರಸ್ ಹರಡಿರುವ ಶಂಕೆ ವ್ಯಕ್ತವಾಗಿದೆ. ಟ್ರಾವೆಲ್ ಹಿಸ್ಟರಿ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವರದಿಗಾಗಿ ವೈದ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಸದ್ಯ ಗೋದಾಮಿನ ಮುಂದೆ ಮಾದನಾಯಕನಹಳ್ಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಸೀಲ್‍ಡೌನ್ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ