ಬೆಂಗಳೂರು: ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ.
ನಗರದಲ್ಲಿ ಕಳೆದ ಒಂದು ವಾರದಿಂದ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಬೆನ್ನಲ್ಲೆ ಶುಕ್ರವಾರ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿನ ಅರೋಪಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿಂದೆ ಕೂಡ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಇದೀಗ ಮತ್ತೊಬ್ಬ ಆರೋಪಿಗೆ ಸೋಂಕು ತಗುಲಿದೆ.

ಒಂದು ಕಡೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕೆಲಸ ಮಾಡುವ ಪೊಲೀಸರಿಗೆ ಕೊರೊನಾ ಭಯ ಶುರುವಾಗಿದ್ದರೆ, ಮತ್ತೊಂದು ಕಡೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಿಗೂ ಪಾಸಿಟಿವ್ ಬರುತ್ತಿದೆ. ಇದರಿಂದಾಗಿ ಪೊಲೀಸರು ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ದಾಖಲೆಯ ಮಟ್ಟದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಒಂದೇ ದಿನ 515 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಪೊಲೀಸರಿಗೆ ಮತ್ತಷ್ಟು ಭಯವನ್ನುಂಟು ಮಾಡಿದೆ
Laxmi News 24×7