Breaking News

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the love

ಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ.ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.

 

ಮಾಧ್ಯಮಗಳಿಂದ ತಿಳಿದಿರುವ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇಡೀ ದೇಶವೇ ನಾಚಿಕೆಪಡುವಂತಹ ವಿಚಾರ. ಸಂಸದರಾಗಿರುವವರು, ಮಾಜಿ ಪ್ರಧಾನಿಯವರ ಮೊಮ್ಮಗ ಈ ರೀತಿ ಕೆಲಸ ಮಾಡಿ ತಲೆ ಮರೆಸಿಕೊಂಡಿರುವುದು ನಾಚಿಕೆಗೇಡು ಎಂದರು.

 

ಬಿಜೆಪಿ ನಾಯಕರು ಈ ವಿಚಾರವಾಗಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡುತ್ತೇನೆ. ಇಲ್ಲಿ ಮಹಿಳೆಯರ ಘನತೆ ಅತೀ ಮುಖ್ಯವಾದ ವಿಚಾರ. ಕಾನೂನು ತನ್ನದೇ ಆದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ