ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ (tomato price) ಪುನಃ ನಾನೂರು ರೂಪಾಯಿ ದಾಟಿದೆ. ಹತ್ತು ಕೆಜಿ ಟೊಮ್ಯಾಟೊ ಬಾಕ್ಸ್ ಬೆಲೆ (tomato price rise) ನಾನೂರು ರೂಪಾಯಿ ತಲುಪಿದ್ದು, ಗ್ರಾಹಕರ ಕೈ ಸುಡಲು ಸಿದ್ಧವಾಗಿದೆ.
ಬಿಸಿಲಿನ ತಾಪಕ್ಕೆ ಹೆಚ್ಚಾಗಿ ಫಸಲು ಬಾರದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚುತ್ತಿದೆ.ಜೊತೆಗೆ ಟೊಮ್ಯಾಟೊ ಬೆಳೆಗೆ ಬಿನುಗು ರೋಗ ತಗುಲಿದ ಹಿನ್ನೆಲೆಯಲ್ಲಿ ನಿರೀಕ್ಷಿತ ಫಸಲು ಕೂಡ ಬಂದಿಲ್ಲ. ಆ ಬಾರಿ ಬಿಸಿಲಿನ ಪರಿಣಾಮ ನಿರೀಕ್ಷೆಗಿಂತ ಮೊದಲೇ ನೀರಿನ ಲಭ್ಯತೆ ಕಡಿಮೆಯಾಗಿದೆ. ಬೋರ್ವೆಲ್‌ಗಳಲ್ಲಿಯೂ ನೀರು ಬತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವು ರೈತರು ಟೊಮ್ಯಾಟೋ ಬೆಳೆಯಲು ಮುಂದಾಗಿಲ್ಲ.

ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಟೊಮ್ಯಾಟೊಗೆ ನಾನೂರು ರೂಪಾಯಿ ನಿಗದಿ ಮಾಡಲಾಗಿದೆ. ನಾಳೆ ನಾಡಿದ್ದರಲ್ಲಿ ಮತ್ತಷ್ಟು ಏರಬಹುದು ಎಂದು ನಿರೀಕ್ಷಿಸಲಾಗಿದೆ.
ಬೆಲೆ ಏರಿಕೆಗೆ ಕಾರಣ
ಉತ್ಪಾದನೆಯಲ್ಲಿ ಕುಸಿತ, ಹವಾಮಾನ ವೈಪರೀತ್ಯ, ಅತಿಯಾದ ಬಿಸಿಲು ಹಾಗೂ ಉಷ್ಣ ವಾತಾವರಣದಿಂದ ಬೆಳೆ ಕಡಿಮೆಯಾಗಿ ಬೆಲೆ ಏರಿಕೆಯಾಗಿದೆ. ಒಂದು ಅಧ್ಯಯನದ ಪ್ರಕಾರ ಗ್ರಾಹಕ ಕೊಂಡುಕೊಳ್ಳುವ ಬೆಲೆಯಲ್ಲಿ ರೈತನಿಗೆ ಕೇವಲ ಶೇಕಡಾ 32ರಷ್ಟು ಮಾತ್ರ ದಕ್ಕುತ್ತದೆ.
Laxmi News 24×7