Breaking News

ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

Spread the love

ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

ಹುಬ್ಬಳ್ಳಿ, ಏಪ್ರಿಲ್ 28: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನಾಳೆ ಸೋಮವಾರದಿಂದ (ಏಪ್ರಿಲ್ 29) ನಡೆಯಲಿರುವ ಪೂರಕ ಪರೀಕ್ಷೆಗಳಿಗೆ (ಪರೀಕ್ಷೆ-2) ಹಾಜರಾಗುತ್ತಿದ್ದಾರೆ. ಇದೀಗ ಈ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯು ಸಿಹಿ ಸುದ್ದಿ ನೀಡಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುತ್ತಾರೆ. ಹೀಗಾಗಿ ಅವರಿಗೆ ತಮ್ಮ ನಿವಾಸದಿಂದ ಬೇರೆ ಪ್ರದೇಶದಲ್ಲಿರುವ ಪರೀಕ್ಷಾ ಕೇಂದ್ರಗಳವರೆಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮುಂದಿನ ತಿಂಗಳು ಮೇ 16ರವರೆಗೆ ನಡೆಯಲಿವೆ. ಈ ಪರೀಕ್ಷೆಗಳಿಗೆ ಹಾಜರಾಗುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣವು ಅನುಕೂಲವಾಗಲಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದು. ನಂತರ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಪಿಯುಸಿ -2 ಪರೀಕ್ಷೆ: ಹಾಜರಾಗುವ ವಿದ್ಯಾರ್ಥಿಗಳು

ನಾಳೆ ಸೋಮುವಾರದಿಂದ ನಡೆಯಲಿರುವ ದ್ವಿತೀಯ ಪಿಯುಸಿ -2 ಪೂರಕ ಪರೀಕ್ಷೆ ಗೆ ಕರ್ನಾಟಕದಲ್ಲಿ ಬರೋಬ್ಬರಿ 1,49,300 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಈಗಾಗಲೇ ಅವರೆಲ್ಲ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 32 ಸಾವಿರ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಹ ಫಲಿತಾಂಶ ಹೆಚ್ಚಳ ಮಾಡಲು ಮರು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಒಂದೊಂದು ವಿಷಯ ಮೇಲೆ ಪರೀಕ್ಷೆಯು ಮಧ್ಯಾಹ್ನ 2-15 ರಿಂದ ಸಂಜೆ 04-30 ಗಂಟೆವರೆಗೆ ನಡೆಯಲಿವೆ.

ಪರೀಕ್ಷೆ-2 ವೇಳಾಪಟ್ಟಿ ಮಾಹಿತಿ

ಸೋಮವಾರ ಏಪ್ರಿಲ್ 29- ಕನ್ನಡ, ಅರೇಬಿಕ್, ಏಪ್ರಿಲ್ 30 -ಇತಿಹಾಸ / ಭೌತಶಾಸ್ತ್ರ, ಮೇ 02- ಇಂಗ್ಲಿಷ್, ಮೇ 03- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 04 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ

ಮೇ 09- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ.

ಮೇ 11- ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13- ಅರ್ಥಶಾಸ್ತ್ರ, ಮೇ 14- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಮೇ 15- ಹಿಂದಿ, ಮೇ 16- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್ ಹಾಗೂ ಮೇ 16- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್, ಆಟೋಮೊಬೈಲ್, ರೀಟೈಲ್ ವಿಷಯದ ಪರೀಕ್ಷೆಗಳು ನಡೆಯಲಿವೆ.


Spread the love

About Laxminews 24x7

Check Also

ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್! ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ

Spread the loveಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ (Dharmasthala) ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್‌’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್‌ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ