ಶಿವಮೊಗ್ಗ: ‘ದೇಶ ಕಂಡ ಮಹಾನ್ ಸುಳ್ಳುಗಾರ ಪ್ರಧಾನಿ ನರೇಂದ್ರ ಮೋದಿ. ಅವರು ಹೇಳುತ್ತಿರುವ ಸುಳ್ಳುಗಳೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣ ಆಗಲಿವೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಬೇರೆ ಬೇರೆ ಪಕ್ಷದವರು ಬಹಳಷ್ಟು ಜನರು ಪ್ರಧಾನ ಮಂತ್ರಿಗಳಾಗಿದ್ದಾರೆ.ಆದರೆ, ನರೇಂದ್ರ ಮೋದಿ ಅವರಷ್ಟು ಸುಳ್ಳನ್ನು ಯಾರೂ ಹೇಳಿಲ್ಲ ಎಂದು ಲೇವಡಿ ಮಾಡಿದರು.

‘ನರೇಂದ್ರ ಮೋದಿ ತಮ್ಮ 10 ವರ್ಷಗಳ ಆಡಳಿತದ ಸಾಧನೆಯ ಬಿಟ್ಟು ಬೇರೆ ಬೇರೆ ವಿಷಯಗಳನ್ನು ಜನರ ಮುಂದೆ ಹೇಳುತ್ತಿದ್ದಾರೆ. ಆಯಾ ರಾಜ್ಯಕ್ಕೆ ತಕ್ಕಂತೆ ಪೋಷಾಕು ಧರಿಸಿಕೊಂಡು ವೇಷಕ್ಕೆ ತಕ್ಕಂತೆ ಸುಳ್ಳು ಹೇಳುತ್ತಾ ದೇಶದ ಜನರನ್ನೇ ದಿಕ್ಕು ತಪ್ಪಿಸಿದ್ದಾರೆ’ ಎಂದು ಕಿಡಿಕಾರಿದರು.
Laxmi News 24×7