ಹಾಸನ: ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.
ಸೋಮವಾರ, ಸದ್ಯ ಸುತ್ತುತ್ತಿರುವ ವಿಡಿಯೋಗಳ ಆಧಾರದ ಮೇಲೆ ಗುರುತಿಸಲ್ಪಟ್ಟ ಐವರು ಮಹಿಳೆಯರನ್ನು ಎಸ್‌ಐಟಿಯ ಹಿರಿಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತರು ಆರೋಪಿಗಳ ಸಂಪರ್ಕಕ್ಕೆ ಬಂದಿದ್ದು ಹೇಗೆ ಮತ್ತು ಅವರ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತಪಡಿಸಿದ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಅಧಿಕಾರಿಗಳು ಕೂಡ ವಿಡಿಯೋಗಳನ್ನು ಯಾರು ರೆಕಾರ್ಡ್ ಮಾಡಿದ್ದಾರೆ ಮತ್ತು ವಿಡಿಯೋ ಬಳಸಿ ಅವರಲ್ಲಿ ಯಾರನ್ನಾದರೂ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಸಂತ್ರಸ್ತರನ್ನು ಪ್ರಶ್ನಿಸಿದ್ದಾರೆ. ಸಂತ್ರಸ್ತರನ್ನು ಕೆಲವು ಗಂಟೆಗಳ ಕಾಲ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಯಿತು ಮತ್ತು ಅವರ ಹೇಳಿಕೆಗಳನ್ನು ಮಹಿಳಾ ಸಿಬ್ಬಂದಿ ದಾಖಲಿಸಿಕೊಂಡಿದ್ದಾರೆ.
Laxmi News 24×7