ಬೆಂಗಳೂರು,ಏ.30- ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಂಭವವಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ.

2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದರು.
ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಹೀಗಾಗಿ ಇವರೆಲ್ಲರ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ.
Laxmi News 24×7