Breaking News

ಕಾಂಗ್ರೆಸ್​ಗೆ ಪ್ರಧಾನಿ ಮೋದಿ ಖಡಕ್ ಸವಾಲು

Spread the love

ವದೆಹಲಿ: ತಮ್ಮ ನೇತೃತ್ವದ ಕೇಂದ್ರ ಸರ್ಕಾರ ರದ್ದುಪಡಿಸಿರುವ ಸಂವಿಧಾನದ 370ನೇ ವಿಧಿಯನ್ನು ಮರುಸ್ಥಾಪಿಸುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸವಾಲೆಸೆದಿದ್ದಾರೆ.

ಕಾಂಗ್ರೆಸ್​ಗೆ ಧೈರ್ಯವಿದ್ದರೆ 370ನೇ ವಿಧಿಯನ್ನು ಮರುಸ್ಥಾಪನೆ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿ ಎಂದು ಮೋದಿ ಹೇಳಿದ್ದಾರೆ.ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ, ‘ಅವರು (ಕಾಂಗ್ರೆಸ್) ಸಂವಿಧಾನದ ಬಗ್ಗೆ ದೊಡ್ಡ ದೊಡ್ಡ ಮಾತನ್ನಾಡುತ್ತಾರೆ. ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತಾಡುತ್ತಾರೆ. ಅವರು ನಮ್ಮನ್ನು ಬಹಳಷ್ಟು ನಿಂದಿಸುತ್ತಾರೆ.

ಆದರೆ ಬಾಬಾಸಾಹೇಬ್ ಅಂಬೇಡ್ಕರ್​ರ ಸಂವಿಧಾನವನ್ನು ಕಾಂಗ್ರೆಸ್ ಇಡೀ ದೇಶಕ್ಕೆ ಅನ್ವಯ ಮಾಡಿರಲಿಲ್ಲ’ ಎಂದು ಮೋದಿ ಹೇಳಿದರು. ಕಳೆದ 70 ವರ್ಷಗಳಲ್ಲಿ ಭಾರತದ ಸಂವಿಧಾನ ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯವಾಗಿರಲಿಲ್ಲ. 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಅಲ್ಲಿ ಇದೇ ಮೊದಲ ಬಾರಿಗೆ ದಲಿತರಿಗೆ ಮೀಸಲಾತಿ ಸಿಗುತ್ತಿದೆ.

ವಾಲ್ಮೀಕಿ ಸಮುದಾಯಕ್ಕೆ ಮೊದಲ ಸಲ ಮೀಸಲಾತಿ ದೊರಕುತ್ತಿದೆ ಎಂದು ಹೇಳಿದ ಮೋದಿ, ಕಾಂಗ್ರೆಸ್​ನವರು ಯಾವುದರ ಬಗ್ಗೆ ಮಾತನಾಡುತ್ತಾರೆ ಎಂದು ಖಾರವಾಗಿ ಪ್ರಶ್ನಿಸಿದರು. ಸುದ್ದಿಗೋಷ್ಠಿಯೊಂದನ್ನು ನಡೆಸಿ, ‘ನಾವು 370ನೇ ವಿಧಿಯನ್ನು ವಾಪಸ್ ತರುತ್ತೇವೆ’ ಎಂದು ಹೇಳುವ ಧೈರ್ಯ ಕಾಂಗ್ರೆಸ್​ಗೆ ಇದೆಯೇ ಎಂದು ಸವಾಲು ಹಾಕಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ