Breaking News

ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗುವುದಿಲ್ಲ, ಪುರಾವೆಗಳು ಬೇಕು’: ಪ್ರಜ್ವಲ್ ರೇವಣ್ಣ ಬಂಧನ ಬಗ್ಗೆ ಡಾ ಜಿ ಪರಮೇಶ್ವರ್ ಪ್ರತಿಕ್ರಿಯೆ

Spread the love

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ವಿಡಿಯೋ ಪ್ರಕರಣದಲ್ಲಿ ಕೇಸು ದಾಖಲಾಗಿದ್ದರೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್​ಡಿ ರೇವಣ್ಣರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆ ಮತ್ತು ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು ಇದಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಅಪರಾಧ ದಂಡಸಂಹಿತೆಯ (CRPC) ಸೆಕ್ಷನ್ 41ಎ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್​ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್​ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಇದರಲ್ಲಿ ಅನೇಕ ಮಹಿಳೆಯರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡಲು ಆಗುವುದಿಲ್ಲ. ಹಾಗಾಗಿಯೇ ಎಸ್​ಐಟಿ ರಚನೆ ಮಾಡಿದ್ದೇವೆ ಎಂದು ಪರಮೇಶ್ವರ ಹೇಳಿದರು.

ಎಸ್​ಐಟಿ ರಚನೆ ಬಳಿಕವೂ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಲೀಕ್ ಆದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲವನ್ನು ಎಸ್​ಐಟಿ ಗಮನಿಸುತ್ತದೆ. ಅದಕ್ಕೆ ನಾವೇನೂ ಹೇಳಲು ಬರುವುದಿಲ್ಲ ಎಂದರು.

 


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ