Breaking News

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the love

ಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರಣಿ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ತಿಂಗಳಾನುಗಟ್ಟಲೆ ಓಡಾಡಿದರು ವೀಸಾ ಸಿಗುವುದಿಲ್ಲ ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು ಎಂದು ಪ್ರಶ್ನಿಸಿದರು.

ಹಾವೇರಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಜರ್ಮನಿಗೆ ಹೋಗಲು ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು? ಜನರು ತಿಂಗಳುಗಟ್ಟಲೆ ಓಡಾಡಿದರೂ ವೀಸಾ ಸಿಗುವುದಿಲ್ಲ.

ಆದರೆ ಪ್ರಜ್ವಲ್ ರೇವಣ್ಣಗೆ ಹೇಗೆ ಒಂದೇ ದಿನದಲ್ಲಿ ವೀಸಾ ಸಿಕ್ಕಿತು? ಈ ವಿಚಾರವನ್ನು ಚುನಾವಣೆಯಲ್ಲಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಹೇಳಿಕೆ ನೀಡಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕಾರ ಕಾಂಗ್ರೆಸ್ ಜೆಡಿಎಸ್ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಯಾರ ಮೇಲೆ ಯಾರು ಬೇಕಾದರೂ ಆರೋಪ ಮಾಡಬಹುದು. ಆ ಕೃತ್ಯ ಆಗಿದ್ದು ನಿಜ ಅಲ್ವಾ? ಆ ಹೆಣ್ಣು ಮಕ್ಕಳ ಪರಿಸ್ಥಿತಿ ಏನು? ಸಮಾಜದಲ್ಲಿ ಮಹಿಳೆಯರು ತಲೆ ಎತ್ತಿ ತಿರುಗಾಡದಂತೆ ಆಗಿದೆ. ಆ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಲಿ ಅಷ್ಟೇ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ