Breaking News

ಪ್ರಜ್ವಲ್ ರೇವಣ್ಣ ವಿರುದ್ಧ SIT ಲುಕ್‌ಔಟ್ ನೊಟೀಸ್

Spread the love

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ.ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್‌ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.

 

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ‌ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.


Spread the love

About Laxminews 24x7

Check Also

ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಸರ್ದಾರ್ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ‘ಚೆಸ್ ಪಾರ್ಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ