Breaking News

ಭವಾನಿ ರೇವಣ್ಣಗೆ ಸ್ಥಳೀಯ ಪೊಲೀಸರ ಮೂಲಕ ಎಸ್‌ಐಟಿ ನೋಟಿಸ್..!

Spread the love

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಭವನಿ ರೇವಣ್ಣಗೆ ಸ್ಥಳೀಯ ಪೊಲೀಸರ ಮೂಲಕ ಎಸ್‌ಐಟಿ ನೋಟಿಸ್ ನೀಡಿದೆ.

ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಇಂದು ಸ್ಥಳೀಯರ ಪೊಲೀಸರು ಹಳೆನರಸೀಪುರದಲ್ಲಿರುವ ಎಚ್.ಡಿ. ರೇವಣ್ಣ ಮನೆಗೆ ನೋಟಿಸ್ ನೀಡಿ ಹೋಗಿರುವ ಬಗ್ಗೆ ಮಾಹಿತಿ ಸಿಗುತ್ತಿದ್ದು, ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಎಸ್‌ಐಟಿ ವಿಚಾರಣೆ ಎರಡು ಬಾರಿ ನೋಟಿಸ್ ನೀಡಿದೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಅವರಿಗೂ ಕೂಡ ಎಸ್‌ಐಟಿ ನೋಟಿಸ್ ನೀಡಿದೆ. ಆದರೂ ಕೂಡ ಅವರಿಬ್ಬರೂ ಇದುವರೆಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗಿಲ್ಲ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ