Breaking News

ನೇಹಾ ಹತ್ಯೆ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ’ ಸಹಿ ಸಂಗ್ರಹ ಅಭಿಯಾನ

Spread the love

ರಾದ್: ‘ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ’ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ಪಟ್ಟಣದ ಇಕ್ರಾ ಪಿಯು ಕಾಲೇಜಿನಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕ್ಲೆ ‘ಸಿಐಡಿ ತನಿಖೆಯಿಂದ ನೊಂದ ಕುಟುಂಬಸ್ಥರಿಗೆ ನ್ಯಾಯ ಸಿಗುವುದಿಲ್ಲ.ಇದನ್ನು ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.

‘ಈ ರೀತಿಯ ಪ್ರಕರಣದಲ್ಲಿ ಆರೋಪಿಗಳನ್ನು ಗಲ್ಲಿಗೇರಿಸಿದರೆ ಮಾತ್ರ ಪುನಃ ಇಂತಹ ಪ್ರಕರಣಗಳು ನಡೆಯವುದಿಲ್ಲ. ಹೀಗಾಗಿ ಆರೋಪಿ ಫಯಾಜ್‍ಗೆ ಗಲ್ಲಿಗೇರಿಸಲು ಆಗ್ರಹಿಸಿ ಎಬಿವಿಪಿಯಿಂದ ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಿದ್ದೇವೆ. ಇದಕ್ಕೆ ಎಲ್ಲ ಕಡೆ ಉತ್ತಮ ಸ್ಪಂದನೆ ಕೂಡ ಸಿಗುತ್ತಿದೆ’ ಎಂದು ಹೇಳಿದರು.

‘ಈ ಪ್ರಕರಣ ಸಂಬಂಧ ಆರಂಭದಲ್ಲಿ ಸರ್ಕಾರ ನೀಡಿದ ಹೇಳಿಕೆ ನೋಡಿದರೆ ತನಿಖೆ ದಾರಿ ತಪ್ಪಿಸುವುದಾಗಿದೆ. ಹೀಗಾಗಿ ಸಿಬಿಐ ತನಿಖೆ ನಡೆದು ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ರಾಷ್ಟ್ರಪತಿಗೆ ಸಹಿ ಸಂಗ್ರಹ ಅಭಿಯಾನ ವರದಿ ಸಲ್ಲಿಸುತ್ತೇವೆ’ ಎಂದರು.

ಎಬಿವಿಪಿ ಮುಖಂಡ ಅಶೋಕ ಶೆಂಬೆಳ್ಳಿ, ಹೇಮಂತ, ರಾಹುಲ್, ಮಲ್ಲಿಕಾರ್ಜುನ, ಅನೀಲ ಮೇತ್ರೆ ವಿದ್ಯಾರ್ಥಿಗಳು ಹಾಜರಿದ್ದರು.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ