Breaking News

ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ: ಮಾಜಿ ಸಂಸದ ಶಿವರಾಮೇಗೌಡ

Spread the love

ಮಂಡ್ಯ: ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದರೂ ಅವರ ಅಪ್ಪ, ಅಮ್ಮ ಕತ್ತೆ ಕಾಯುತ್ತಿದ್ದರಾ? ಒಂದು ಕಡೆ ಅಪ್ಪ, ಮತ್ತೊಂದು ಕಡೆ ಮಗ ಈ ರೀತಿ ಮಾಡಿ ದೊಡ್ಡ ಗೌಡರನ್ನು ಚಿಂತೆ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ.ಅವರು ಮಾಡಿರುವ ಪಾಪ ಅವರೇ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 

ದೇವರಾಜೇಗೌಡ ಪೆನ್ ಡ್ರೈವ್ ಬಿಡುವ ಹೇಳಿಕೆ ಕೊಟ್ಟಿದ್ದರು. ಆವಾಗ ದೇವೇಗೌಡರು, ಕುಮಾರಸ್ವಾಮಿ ಕತ್ತೆ ಕಾಯುತ್ತಿದ್ದರಾ ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಸಮಸ್ಯೆ ಬಗ್ಗೆ ಹರಿಸುವ ಕೆಲಸ ಮಾಡಬೇಕಿತ್ತು. ಅವರಿಗೂ ವಿಡಿಯೋ ಬಿಡುಗಡೆ ಆಗಬೇಕೆಂದಿತ್ತೇನೋ? ಕುಮಾರಸ್ವಾಮಿ ಸಂತ್ರಸ್ತ ಮಹಿಳೆಯರ ಪರ ಬರಬೇಕು ಎಂದು ಮಂಡ್ಯದಲ್ಲಿ ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ