Breaking News

ಹೆಚ್​​ಡಿ ರೇವಣ್ಣ ಎಸ್​ಐಟಿ ವಶಕ್ಕೆ

Spread the love

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು (Former Minister HD Revanna) ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (Former PM HD Devegowda) ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮೈಸೂರಿನ ಕೆಆರ್​ ನಗರ (KR Nagar) ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದರು. ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಕೆಲ ಗಂಟೆಗಳ ಹಿಂದೆಯಷ್ಟೇ ರೇವಣ್ಣನ ಆಪ್ತನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ. ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ.

ರೇವಣ್ಣ ಆಪ್ತ ಸಹಾಯಕನ ತೋಟದ ಮನೆಯಿಂದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ. ಏಪ್ರಿಲ್ 29ರಂದು ಸಂತ್ರಸ್ತೆಯನ್ನು ಅವರ ಮನೆಯಿಂದ ರೇವಣ್ಣ ಸಂಬಂಧಿ ಸತೀಶ್ ಬಾಬು ಕರೆದೊಯ್ಯಲಾಗಿತ್ತು. ಆಗಿಂದಲೂ ಹುಣಸೂರು ತಾಲೂಕಿನ ಕಾಳೇನಳ್ಳಿಯಲ್ಲಿರುವ ರೇವಣ್ಣ ಆಪ್ತ ಸಹಾಯಕ ರಾಜಶೇಖರ್ ತೋಟದಲ್ಲಿ ಇರಿಸಲಾಗಿತ್ತು.

ಜಾಮೀನು ಅರ್ಜಿ ವಜಾ

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಎಚ್‌ಡಿ ರೇವಣ್ಣ ಪರ ವಕೀಲರು ಹಾಜರಾಗಿ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ರು. ಈಗ ಜಾಮೀನು ನೀಡಿದ್ರೆ ಇಂದೇ ಸಂಜೆ 5.30ಕ್ಕೆ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರೆ ಅಂತ ಭರವಸೆ ನೀಡಿದ್ರು. ಆದರೆ ಇದಕ್ಕೆ ಎಸ್‌ಐಟಿ ಎಸ್‌ಪಿಪಿ ಜಗದೀಶ್ ವಿರೋಧ ವ್ಯಕ್ತಪಡಿಸಿದರು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿದೆ.

ಪ್ರಜ್ವಲ್‌ ರೇವಣ್ಣಗೆ ಬ್ಲ್ಯೂ ಕಾರ್ನರ್‌ ನೋಟಿಸ್‌ ಸಾಧ್ಯತೆ!

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಲೀಕ್ ಆದ ದಿನದಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಮುಂದಾಗಿರುವ ಎಸ್‌ಐಟಿ ಈಗಾಗಲೇ ಹಲವು ಬಾರಿ ನೋಟಿಸ್ ನೀಡಿದೆ.

ಲುಕ್‌ಔಟ್‌ ನೋಟಿಸ್ ಜಾರಿ ಕೂಡ ಮಾಡಿದೆ. ಆದ್ರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲೇ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಬಿಐ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ