Breaking News

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪಸಿಕ್ಕಿಬಿದ್ದಿದ್ದಬೆಂಬಲಿಗರು

Spread the love

ಬೆಳಗಾವಿ:- ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಐವರನ್ನ ಪೊಲೀಸರಿಗೆ ಬಿಜೆಪಿ ಕಾರ್ಯಕರ್ತರು ಒಪ್ಪಿಸಿದ್ದಾರೆ.

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ.ಅಂಕಲಗಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಒಂದು ಸಾವಿರ ರೂಪಾಯಿ ಹಂಚುತ್ತಿದ್ದ ವೇಳೆ ಹಣದ ಸಮೇತ ನಾಲ್ವರು ಹೆಬ್ಬಾಳ್ಕರ್ ಬೆಂಬಲಿಗರು ಸಿಕ್ಕಿಬಿದ್ದಿದ್ದಾರೆ. ಹಣ ಹಂಚುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಬರುತ್ತಿದ್ದಂತೆ ಓಡಿ ಹೋಗಲು ಯತ್ನಿಸಿದ್ದಾರೆ. ಬಳಿಕ ಸಿನಿಮೀಯ ರೀತಿಯಲ್ಲಿ ಓಡಾಡಿಸಿ ಹಿಡಿದಿದ್ದಾರೆ.

ಇನ್ನು ಮತದಾರರಿಗೆ ಹಂಚಲು ತಂದಿದ್ದ ಇಪ್ಪತ್ತು ಲಕ್ಷ ಹಣ ಮತ್ತು ಐವರನ್ನ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿ, ಇಬ್ಬರು ಭದ್ರಾವತಿ ಮೂಲದ ಯುವಕರು ಹಾಗೂ ಇಬ್ಬರು ಹರ್ಷಾ ಶುಗರ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಹಿಡಿದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಪರ ಹಣ ಹಂಚಲು ಕಾಂಗ್ರೆಸ್ ಮುಖಂಡ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿ ಜೊತೆಗೆ ಬಂದಿದ್ದಾಗಿ ಇಬ್ಬರು ಹೇಳಿದ್ದಾರೆ. ಈ ಘಟನೆ ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Spread the loveಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಸೋಲಲು ಕಾರಣರಾದ ಕಾಂಗ್ರೆಸ್ ಪಕ್ಷ  ಹಾಗೂ ಅವರ ಮಿತ್ರ ಪಕ್ಷದವರನ್ನು ದೇಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ