Breaking News

ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Spread the love

ಲಬುರಗಿ: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ (Dr.Nagareddy Patil) ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

ನಾಗರೆಡ್ಡಿ ಅವರ ಪುತ್ರ ಶಿವಶರಣರೆಡ್ಡಿ ಪಾಟೀಲ್‌ ಸದ್ಯ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾಗರೆಡ್ಡಿ ಅವರು ಸಹೋದರ ಮತ್ತು ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಇಂದು (ಮೇ 6) ಅಪರಾಹ್ನ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

1983-85ರ ಅವಧಿಯಲ್ಲಿ ಬಿಜೆಪಿ ಶಾಸಕರಾಗಿದ್ದ ಡಾ.ನಾಗರೆಡ್ಡಿ ಬಳಿಕ ಜನತಾದಳ ಸೇಪರ್ಡೆಯಾಗಿದ್ದರು. ಬಳಿಕ ಕಾಂಗ್ರೆಸ್‌ ಸೇರಿದ್ದ ಅವರು ಸುಮಾರು ಎರಡು ದಶಕಗಳಿಂದ ಕಾಂಗ್ರೆಸನಲ್ಲೇ ಇದ್ದರು.

ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ವಾರದ ಹಿಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದರು.

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ