Breaking News

ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ರೋಹಿತ್​ ಶರ್ಮ!

Spread the love

 ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ರೋಹಿತ್​ ಶರ್ಮ!

ಮುಂಬಯಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟಿ20 ವಿಶ್ವಕಪ್​ಗೆ ಮುನ್ನೆಚ್ಚರಿಕಾ ಕ್ರಮವಾಗಿ ಬೆನ್ನು ನೋವಿನಿಂದ ಬಳಲುತ್ತಿರುವ ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಅವರು ಇನ್ನುಳಿದ ಮೂರು ಐಪಿಎಲ್​(IPL 2024) ಪಂದ್ಯಗಳಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.ಇಂದು ನಡೆಯುವ ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad) ಎದುರಿನ ಪಂದ್ಯದಲ್ಲಿಯೂ ರೋಹಿತ್​ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಕಳೆದ ಕೆಕೆಆರ್​ ವಿರುದ್ಧದ ಪಂದ್ಯದ ವೇಳೆ ರೋಹಿತ್​ಗೆ ಸಣ್ಣ ಮಟ್ಟಿನ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆ ಪಂದ್ಯದಲ್ಲಿ ಕೇವಲ ಇಂಪ್ಯಾಕ್ಟ್‌ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ಮಾಡಿದ್ದರು. ಫೀಲ್ಡಿಂಗ್​ ಮಾಡಿರಲಿಲ್ಲ. ರೋಹಿತ್‌ ಗಾಯದ ಬಗ್ಗೆ ಪಂದ್ಯ ಮುಕ್ತಾಯದ ಬಳಿಕ ತಂಡದ ಹಿರಿಯ ಸ್ಪಿನ್ನರ್‌ ಚಾವ್ಲಾ ಮಾಹಿತಿ ನೀಡಿದ್ದರು. ಬೆನ್ನು ನೋವು ಸಣ್ಣ ಪ್ರಮಾಣದ್ದಾಗಿದ್ದು ಯಾವುದೇ ಆತಂಕ ಪಡಬೇಕಿಲ್ಲ ಎಂದಿದ್ದರು.

ರೋಹಿತ್​ ಶರ್ಮ ಈ ಬಾರಿಯ ಐಪಿಎಲ್​ನಲ್ಲಿ ಅಷ್ಟಾಗಿ ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿಲ್ಲ. ಆಡಿದ 11 ಇನಿಂಗ್ಸ್​ಗಳಿಂದ ಕೇವಲ 326 ರನ್​ ಮಾತ್ರ ಗಳಿಸಿದ್ದಾರೆ. ಅವರ ಈ ಬ್ಯಾಟಿಂಗ್​ ವೈಫಲ್ಯಕ್ಕೆ ನಾಯಕತ್ವ ಬದಲಾವಣೆಯೂ ಕೂಡ ಕಾರಣವಾಗಿರಬಹುದು. 5 ಬಾರಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದರೂ ಏಕಾಏಕಿ ತಂಡದ ನಾಯಕತ್ವದಿಂದ ಕೆಳಗಿಳಿಸಿದ ಅಸಮಾಧಾನವೂ ಇರಬಹುದು. ಮುಂದಿನ ಆವೃತ್ತಿಯಲ್ಲಿ ಮುಂಬೈ ತೊರೆದು ಬೇರೆ ತಂಡದ ಪರ ಆಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ