Breaking News

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ ರೇವಣ್ಣ!

Spread the love

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಂದರ್ಭದಲ್ಲಿ ಎಚ್‌.ಡಿ.ರೇವಣ್ಣ ಅವರು ಮೂರು ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದರು.ಪೊಲೀಸ್ ವಾಹನದಿಂದ ಇಳಿದಿದ್ದ ರೇವಣ್ಣ, ನಿಂಬೆ ಹಣ್ಣುಗಳ ಸಮೇತ ನ್ಯಾಯಾಧೀಶರ ಮನೆಯತ್ತ ಹೆಜ್ಜೆ ಹಾಕಿದರು. ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೂ ರೇವಣ್ಣ ನಿಂಬೆ ಹಣ್ಣು ಬಿಟ್ಟಿರಲಿಲ್ಲ.

ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದ್ದ ರೇವಣ್ಣ, ‘ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರು ಈ ರೀತಿ ಮಾಡಿದ್ದಾರೆ. ನನಗೆ ನ್ಯಾಯ ಕೊಡಿ’ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.

ನ್ಯಾಯಾಧೀಶರ ನಿವಾಸದಲ್ಲಿ ಎಚ್​.ಡಿ. ರೇವಣ್ಣ ಪರ ವಕೀಲ ಮತ್ತು ಎಸ್​ಐಟಿ ಅಧಿಕಾರಿಗಳ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ರೇವಣ್ಣರನ್ನು ಮೇ.08ರವರೆಗೆ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ರಾಷ್ಟ್ರಮಟ್ಟದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಒಂದೆಡೆ ವಿದೇಶಕ್ಕೆ ಹಾರಿರುವ ಪ್ರಜ್ವಲ್​ ಬಂಧಿಸಲು ಎಸ್​ಐಟಿ ಅಧಿಕಾರಿಗಳು ಏರ್​ಪೋರ್ಟ್​ನಲ್ಲಿ ಕಾದು ಕುಳಿತಿದ್ದಾರೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ