Breaking News

ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ

Spread the love

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುತ್ತಿದೆ ಎಂದು ವಿಪಕ್ಷಗಳ ಆರೋಪದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ.” ಎಂದು ಸ್ಪಷ್ಟನೆ ನೀಡಿದ್ದಾರೆ.

ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್ ಎಂದು ಬಿಜೆಪಿ ನಾಯಕ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದಿರುವ ಸಿದ್ದರಾಮಯ್ಯ, ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ