Breaking News

ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Spread the love

ಹುಬ್ಬಳ್ಳಿ: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಡೈರಿಸ್ ಕಂಪನಿಯಿಂದ ಉಚಿತವಾಗಿ ಐಸ್ ಕ್ರೀಮ್ ವಿತರಿಸಲು ಕಂಪನಿಯ ಮಾಲಕರು ಮುಂದಾಗಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಲಕರಾದ ಅಕ್ಷಯ ಢಾಣಕ ಶಿರೂರ ಮತ್ತು ಅಕ್ಷಯ ಸರಾಫ, ಮತ ಚಲಾವಣೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.ಮಂಗಳವಾರ ಬೆಳಗ್ಗೆ 11:00ರಿಂದ ರಾತ್ರಿ11:00 ಗಂಟೆ ವರೆಗೆ ಇಲ್ಲಿನ ವಿದ್ಯಾನಗರ ಶಿರೂರ ಪಾರ್ಕ್ ಮತ್ತು ಕೇಶ್ವಾಪುರದ ನಮ್ಮ ಔಟ್‌ಲೆಟ್‌ಗಳಲ್ಲಿ ಉಚಿತವಾಗಿ ಒಂದು ಸಾವಿರ ಲೀಟರ್‌
ಐಸ್ ಕ್ರೀಮ್ ಅನ್ನು ಸುಮಾರು 10ಸಾವಿರ ಜನರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

 

ಪ್ರಜಾಪ್ರಭುತ್ವ ಉಳಿವಿಗೆ ಕಡ್ಡಾಯ ಮತದಾನ ಅವಶ್ಯ. ನಿಮ್ಮ ಹಕ್ಕು ಚಲಾಯಿಸಿ, ಪ್ರಜಾಪ್ರಭುತ್ವ ಉಳಿಸಿ ಎಂದ ಧ್ಯೇಯದೊಂದಿಗೆ ಮೊದಲ ಬಾರಿಗೆ ಇಂತಹ ಪ್ರಯತ್ನಕ್ಕೆ ಮುಂದಾಗಿದ್ದು, ಮತದಾರರಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆಯಿದೆ ಎಂದರು


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ