Breaking News

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

Spread the love

ಕೊಪ್ಪಳ: ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

 

ಇನ್ನು ಕುಷ್ಟಗಿ ತಾ| ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ವಾರದ ಹಿಂದೆ ಇದೇ ಬಡಾವಣೆಯ ನಿವಾಸಿ ಲಕ್ಷ್ಮಿ ಎಂಬುವರು ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಾರೆ. ಮಗು ಕೂಡ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯ ದಿಂದ ತಾಯಿ-ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮತ್ತು ಬಡಾವಣೆಯ ಜನ ಆರೋಪಿಸಿದ್ದರು.

ಈ ಹಿನ್ನೆಲಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕರಿಸಿದ್ದಾರೆ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ