Breaking News

ಮತದಾನದ ಬಳಿಕ ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ

Spread the love

ವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್​ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ ಗಾಯಗಳಾಗಿಲ್ಲ ಎಂದು ಬೇತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ.

ಬಳಿಕ ಇವಿಎಂ(EVM) ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ ಗಾಯಗಳಾಗಿಲ್ಲ ಎಂದು ಬೇತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಜಿಲ್ಲೆಯ ಗೋಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೂತ್​ ಸಂಖ್ಯೆ 275, 276,277,278,279 ಹಾಗು 280ಕ್ಕೆ ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು. ಬಸ್​ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಘಟನೆಯ ಸಮಯದಲ್ಲಿ ಬಸ್​ನಲ್ಲಿ ಆರು ಮತಗಟ್ಟೆಗಳ ಇವಿಎಣಗಳು ಇದ್ದವು, ಅವುಗಳಲ್ಲಿ ನಾಲ್ಕಕ್ಕೆ ಹಾನಿಯಾಗಿದೆ. ಎರಡು ಸುರಕ್ಷಿತವಾಗಿದೆ. ಪರಿಣಾಮ ನಾಲ್ಕು ಇವಿಎಂಗಳಲ್ಲಿ ಕಂಟ್ರೋಲ್ ಯೂನಿಟ್​ ಅಥವಾ ಬ್ಯಾಲೆಟ್ ಯೂನಿಟ್​ಗೆ ಹಾನಿಯಾಗಿದೆ.ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ತಮ್ಮ ವರದಿಯನ್ನು ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹಾವೇರಿ: ರಿಪೇರಿಯಾಗದ ಜಲ ಶುದ್ಧೀಕರಣ ಘಟಕ; ರೋಗಗಳಿಗೆ ತುತ್ತಾಗುತ್ತಿರುವ ಜನ

Spread the loveಹಾವೇರಿ: ಜಲ ಶುದ್ಧೀಕರಣ ಘಟಕದ ರಿಪೇರಿ ಹಿನ್ನೆಲೆಯಲ್ಲಿ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಬಗ್ಗೆ ನಗರಸಭೆಯು ಸೂಚನೆ ನೀಡಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ