ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್ ಪ್ರಕರಣದಿಂದ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಮೊದಲೇ ಬಾಹ್ಯ ಮೈತ್ರಿಯನ್ನು ಕಡಿದುಕೊಳ್ಳುವರೇ ಎಂಬ ಚರ್ಚೆ ಆರಂಭವಾಗಿದ್ದು, ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗಳಿಂದ ಎರಡೂ ಪಕ್ಷಗಳ ಪಡಸಾಲೆಯಲ್ಲಿ ಈ ಚರ್ಚೆ ಪ್ರಾರಂಭಗೊಂಡಿದೆ. ಮುಜುಗರ ಎದುರಾದರೆ ಬಿಜೆಪಿ ನಾಯಕರು ಮೈತ್ರಿ ಮುರಿದುಕೊಳ್ಳಬಹುದು ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲೇ ಹೇಳಿಕೆ ನೀಡಿದ್ದು, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿರುವುದು ರಾಜ್ಯ ಬಿಜೆಪಿ ನಾಯಕರಿಗೆ ಅನಿವಾರ್ಯವಾಗಲಿದೆ.
Laxmi News 24×7