Breaking News

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

Spread the love

ಬೆಂಗಳೂರು: ಹಾಸನದ ಅಶ್ಲೀಲ ವೀಡಿ ಯೋಗಳ ಪೆನ್‌ಡ್ರೈವ್‌ ಪ್ರಕರಣದ ಆರೋಪ ಎದುರಿ ಸುತ್ತಿರುವ ಸಂಸದ ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿ ವಾರ ಕಳೆದಿದ್ದು, ವಿದೇಶ ದಿಂದ ಬೆಂಗಳೂರಿಗೆ ಬರುವುದನ್ನೇ ಎಸ್‌ಐಟಿ ಕಾದು ಕುಳಿತಿದೆ. ಆದರೆ ಬಂಧನ ಭೀತಿಯಿಂದಾಗಿ ಸದ್ಯಕ್ಕೆ ಪ್ರಜ್ವಲ್‌ ದೇಶಕ್ಕೆ ವಾಪಸಾಗುವುದೇ ಅನುಮಾನ ಎನ್ನಲಾಗುತ್ತಿದೆ.

 

ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್‌ ಕೊಟ್ಟ ಬಳಿಕ ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ಕೇಳಿದ್ದರು. ಆದರೆ ಇದನ್ನು ಎಸ್‌ಐಟಿ ತಿರಸ್ಕರಿಸಿತ್ತು. ಈಗ ಆ ಕಾಲಾವಕಾಶ ಮುಗಿದರೂ ಪ್ರಜ್ವಲ್‌ ಭಾರತಕ್ಕೆ ಮರಳಿಲ್ಲ. ಹೀಗಾಗಿ ಪ್ರಜ್ವಲ್‌ ಮುಂದಿನ ನಡೆ ಏನು ಎಂಬುದೇ ಕುತೂಹಲ ಕೆರಳಿಸಿದೆ.

ಒಂದೆಡೆ ತಂದೆ ರೇವಣ್ಣ ಬಂಧನ ಕ್ಕೊಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ದೇಶಕ್ಕೆ ವಾಪಸಾದ ಕೂಡಲೇ ಎಸ್‌ಐಟಿ ಅಧಿಕಾರಿಗಳು ತನ್ನನ್ನೂ ಬಂಧಿಸುತ್ತಾರೆ ಎಂಬುದು ಪ್ರಜ್ವಲ್‌ಗ‌ೂ ಗೊತ್ತಿದೆ. ಈ ನಿಟ್ಟಿನಲ್ಲಿ ಬಂಧನ ಭೀತಿಯಿಂದ ಬೆಂಗಳೂರಿಗೆ ಮರಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ 196 ದೇಶಗಳಿಗೆ ಆರೋಪಿ ಬಗ್ಗೆ ವಿವರವಾದ ಮಾಹಿತಿಯನ್ನು ಇಂಟರ್‌ಪೋಲ್‌ ನೀಡಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಮೇ 15ರ ರಾತ್ರಿ ಆಗಮನ?
ಮೇ 15ರ ರಾತ್ರಿ ಪ್ರಜ್ವಲ್‌ ಬೆಂಗಳೂರಿಗೆ ಬರುವ ಸಾಧ್ಯತೆಗಳಿವೆ. ಜರ್ಮನಿಯ ಮ್ಯುನಿಚ್‌ ವಿಮಾನ ನಿಲ್ದಾಣದಿಂದ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಇಮಿಗ್ರೇಶನ್‌ ಇಲಾಖೆ ಯಿಂದ ಪೊಲೀಸರಿಗೆ ಸುಳಿವು ಸಿಕ್ಕಿದೆ ಎನ್ನಲಾಗು ತ್ತಿದೆ. ಪ್ರಜ್ವಲ್‌ ಎರಡು ಬಾರಿ ವಿಮಾನದ ಟಿಕೆಟ್‌ ಬುಕ್‌ ಮಾಡಿ ರದ್ದು ಮಾಡಿದ್ದರು. ಮೇ 15ರಂದು ರಾತ್ರಿ 12.30ಕ್ಕೆ ಟರ್ಮಿನಲ್‌ 2ಕ್ಕೆ ವಿಮಾನ ತಲುಪುವ ವಿಮಾನದಲ್ಲಿ ಬರುವ ಸಾಧ್ಯತೆಗಳಿವೆ. ಕೊನೆ ಕ್ಷಣದಲ್ಲಿ ಈ ಟಿಕೆಟ್‌ ರದ್ದುಗೊಳಿಸಿ ಎಸ್‌ಐಟಿ ಅಧಿಕಾರಿಗಳನ್ನು ಆಟವಾಡಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ