Breaking News

ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Spread the love

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯಾಗಿದ್ದು, ಮೇ 11ರ ವರೆಗೂ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರ ಚಿಕ್ಕಮಗಳೂರು ಸಹಿತ ವಿವಿಧ ಜಿಲ್ಲೆಗಳಲ್ಲಿ ಹಲವು ತಿಂಗಳುಗಳ ಬಳಿಕ ಮಳೆ ಸುರಿದಿದೆ.

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಮೇ 8ರಿಂದ 11ರ ವರೆಗೆ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆ ಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಇಂದು ಬಿಸಿಲು ತೀವ್ರ
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಿಸಿಲಿನ ತೀವ್ರತೆ ಹೆಚ್ಚಿರುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.


Spread the love

About Laxminews 24x7

Check Also

ಸೋರುತಿಹುದು ಬೆಳಗಾವಿ ತಹಶೀಲ್ದಾರರ ಕಾರ್ಯಾಲಯ… ದಾರು ಗಟ್ಟಿ ಮಾಡುವವರಾರಯ್ಯಾ???

Spread the love ಸೋರುತಿಹುದು ಬೆಳಗಾವಿ ತಹಶೀಲ್ದಾರರ ಕಾರ್ಯಾಲಯ… ದಾರು ಗಟ್ಟಿ ಮಾಡುವವರಾರಯ್ಯಾ??? ಸೋರುತಿಹುದು ಬೆಳಗಾವಿ ತಹಶೀಲ್ದಾರರ ಕಾರ್ಯಾಲಯ… ದಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ