Breaking News

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲಿಸಿದ ಎಸ್‌ಐಟಿ!

Spread the love

ಬೆಂಗಳೂರು: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್​​ ರೇವಣ್ಣ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮೂರನೇ ಎಫ್​ಐಆರ್ ದಾಖಲಾಗಿರುವ ಸೆಕ್ಷನ್​ ಪ್ರಜ್ವಲ್​ಗೆ ಕಾನೂನು ಕಂಟಕ ಎದುರಾಗಿದೆ.

 

ಸಂತ್ರಸ್ತೆಯೊಬ್ಬರ ಹೇಳಿಕೆ ಆಧರಿಸಿ ಅತ್ಯಾಚಾರ ಪ್ರಕರಣ ದಾಖಲು ಮಾಡಲು ವಿಶೇಷ ತನಿಖಾ ತಂಡ ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಒಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಿಸಲು ತಯಾರಿ ನಡೆಸುತ್ತಿದ್ದು, ಇಂದು ಸಂಜೆ ಮತ್ತೊಂದು ಎಫ್‍ಐಆರ್ ಆಗೋ ಸಾಧ್ಯತೆ ಇದೆ ಎನ್ನಲಾಗಿದೆ.

ಮೇ 8 ರಂದು ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಎಫ್‍ಐಆರ್ ದಾಖಲಿಸಲು ಮುಂದಾಗಿದ್ದಾರೆ. ಎಫ್​ಐಆರ್​ನಲ್ಲಿ .ಐಪಿಸಿ ಸೆಕ್ಷನ್ 376(2)(ಎನ್) (ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ), 376(2)(ಕೆ) (ಮಹಿಳೆ ಮೇಲೆ ಪದೇ ಪದೇ ಅತ್ಯಚಾರ), 354(ಎ) (ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ), 354(ಬಿ) (ಬಟ್ಟೆ ಹಿಡಿದು ಎಳೆದಾಡಿದ ಆರೋಪ), 354(ಸಿ) (ಖಾಸಗಿ ಚಿತ್ರಗಳನ್ನ ಸೆರೆ ಹಿಡಿದು ವೀಕ್ಷಣೆ ಮಾಡುವುದು, ಆಕೆಯ ಒಪ್ಪಿಗೆ ಇಲ್ಲದೆ ಪ್ರಸಾರ ಮಾಡುವುದು), 506 (ಬೆದರಿಕೆ ಹಾಕುವುದು), ಹೀಗೆ ಮೂರನೇ ಎಫ್‍ಐಆರ್ ನಲ್ಲಿ ಕಠಿಣ ಸೆಕ್ಷನ್ ಗಳನ್ನ ಎಸ್‍ಐಟಿ ಹಾಕಿದೆ.

ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಭಾರತಕ್ಕೆ ಕರೆದೊಂದು ಬಂಧಿಸುವ ವಿಚಾರವಾಗಿ ವಿಶೇಷ ತನಿಖಾ ತಂಡ ಕಾರ್ಯ ಪ್ರವೃತ್ತವಾಗಿದೆ. ಕಿಡ್ನಾಪ್ ಪ್ರಕರಣದ ಆರೋಪಿ, ಮಾಜಿ ಸಚಿವ ಎಚ್ .ಡಿ ರೇವಣ್ಣ ನ್ಯಾಯಾಂಗ ಬಂಧನ ಮುಂದುವರಿದಿದ್ದು, ಜಾಮೀನು ಅರ್ಜಿಯ ವಿಚಾರಣೆ ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ