Breaking News

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್​

Spread the love

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಪ್ರಮುಖ ಆರೋಪಿಯನ್ನು ಬಂಧಿಸಿದೆ.

ಆರೋಪಿಯನ್ನು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಬಳಿ ಬಂಧಿಸಿದ್ದು, ಬಂಧಿತನನ್ನು ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.

ಪ್ರಕರಣದ ಹಿನ್ನೆಲೆ?ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್​

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ