ಹುಬ್ಬಳ್ಳಿ: ಚುನಾವಣಾ ನಂತರ ಜೆಡಿಎಸ್ ಜತೆ ಮೈತ್ರಿ ಇರಬೇಕೋ, ಬೇಡವೋ ಎಂಬುವುದನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಚುನಾವಣೆ ಅವಲೋಕನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ.

ಯಾವುದೇ ನಕಾರಾತ್ಮಕ ಅಂಶಗಳು ಮೂಡಿಲ್ಲ. ಶೀಘ್ರವೇ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಯುವ ಚುನಾವಣೆ ಅವಲೋಕನ ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಮೈತ್ರಿ ಮುಂದುವರಿಯಬೇಕೋ, ಬೇಡವೋ ಎಂಬುವುದನ್ನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಆದರೆ ತಮ್ಮ ರಾಜಕೀಯಕ್ಕಾಗಿ ವಿಡಿಯೋಗಳನ್ನು ಹರಿಬಿಟ್ಟು ಮಹಿಳೆಯರ ಮಾನ ತೆಗೆದಿರುವವರ ವಿರುದ್ಧ ಕ್ರಮವಾಗಬೇಕು. ಪೆನ್‌ಡ್ರೈವ್ ಹೊರ ತಂದವರು ಯಾರು, ಇದರ ಹಿಂದೆ ಯಾರಿದ್ದಾರೆ ಎಂಬುದು ಕೂಡ ತನಿಖೆಯಾಗಬೇಕು. ಆದರೆ ರಾಜ್ಯ ಸರ್ಕಾರದಿಂದ ಸರಿಯಾಗಿ ತನಿಖೆಯಾಗುತ್ತಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ಕೊಡಬೇಕು ಎಂದರು.
Laxmi News 24×7