Breaking News

ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Spread the love

ಬೆಳಗಾವಿ: ಬಿಸಿಲಿನಿಂದ ಬಸವಳಿದಿದ್ದ ಬೆಳಗಾವಿ ಜನತೆಗೆ ಶನಿವಾರ ಮಳೆರಾಯ ತಂಪೆರೆದಿದ್ದು, ಮಳೆ ಆಗಮನದಿಂದ ಜನರು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು.

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

ಬರದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆಗಮನದಿಂದ ಸಾರ್ವಜನಿಕರು ಸಮಾಧಾನವಾಗಿದ್ದಾರೆ.

ಭಾರೀ ಮಳೆ ಆಗಮನದಿಂದ ಇಳೆ ತಂಪಾಗಿದ್ದು, ರೈತರ ಮೊಗದಲ್ಲಿ ಸಂತಸವಾಗಿದೆ. ಈ ವರ್ಷದ ಅತ್ಯಂತ ಜೋರಾದ ಮಳೆ ಸುರಿದಿದೆ.

ಮಧ್ಯಾಹ್ನ 4 ಗಂಟೆ ನಂತರ ನಗರದಲ್ಲಿ ಆರಂಭವಾದ ಬಿರುಗಾಳಿ-ಮಳೆಗೆ ಜನರು ಪರದಾಡಿದರು. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಮಳೆ ಸುರಿಯಿತು. ಜೋರಾಗಿ ಬೀಸಿದ ಬಿರುಗಾಳಿಯಿಂದ ಗಿಡದ ಟೊಂಗೆಗಳು ಮುರಿದು ಬಿದ್ದವು. ಗುಡುಗು-ಸಿಡಿಲು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಭೇಂಡಿ ಬಜಾರ್‌ನಲ್ಲಿ ಗಿಡವೊಂದು ಧರೆಗುರುಳಿದೆ.


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ