ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ವಿಶೇಷ ತನಿಖಾ ಅಧಿಕಾರಿಗಳು ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ್ನನ್ನು ವಶಕ್ಕೆ ಪಡೆದುಕೊಂಡು ಹಾಸನದ ಸೆನ್ ಠಾಣೆಯಲ್ಲಿ ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚಿಸಿತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.
Laxmi News 24×7