ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖಟ್ರಿ ಅವರನ್ನು ಸೇರಿದಂತೆ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ ಕುಮಾರ್ ಖಟ್ರಿ ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೃಷಿ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತೋಟಗಾರಿಕಾ ಮತ್ತು ರೇಷ್ಮೆ ಇಲಾಖೆಗೆ ವರ್ಗಾಯಿಸಲಾಗಿದೆ.
ಗಂಗಾ ರಾಮ್ ಬದರಿಯಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್ )ನ ಪ್ರಧಾನ ಕಾರ್ಯದರ್ಶಿಯಾಗಿ ಎನ್ ಮಂಜುನಾಥ್ ಪ್ರಸಾದ್ ಅಧಿಕಾರ ವಹಿಸಿಕೊಂಡರೆ, ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಟಿ ಕೆ ಅನಿಲ್ ಕುಮಾರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಿಂದುಳಿದ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೊಹಮ್ಮದ್ ಮೊಹ್ಸಿನ್ ಕರ್ನಾಟಕ ಸರ್ಕಾರದ ಪುನರ್ವಸತಿ ಇಲಾಖೆಯ ಆಯುಕ್ತ ಮತ್ತು ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳಲಿದ್ದಾರೆ.
Laxmi News 24×7